ADVERTISEMENT

ದ್ವಿತೀಯ ಪಿ.ಯು ಪರೀಕ್ಷೆ: ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 17:22 IST
Last Updated 16 ಜೂನ್ 2020, 17:22 IST
ಚಾಮರಾಜನಗರದ ಜೆಎಸ್‌ಎಸ್‌ ‍ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಪ‍ರೀಕ್ಷಾ ಕೇಂದ್ರದ ಕೊಠಡಿಗಳು ಹಾಗೂ ಕಾರಿಡಾರ್‌ಗೆ ಸೋಂಕು ನಿವಾರಕ ಸಿಂಪಡಿಸಲಾಯಿತು 
ಚಾಮರಾಜನಗರದ ಜೆಎಸ್‌ಎಸ್‌ ‍ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಪ‍ರೀಕ್ಷಾ ಕೇಂದ್ರದ ಕೊಠಡಿಗಳು ಹಾಗೂ ಕಾರಿಡಾರ್‌ಗೆ ಸೋಂಕು ನಿವಾರಕ ಸಿಂಪಡಿಸಲಾಯಿತು    

ಚಾಮರಾಜನಗರ: ಗುರುವಾರ (ಜೂನ್‌ 18)ದ್ವಿತೀಯ ಪಿಯುಸಿ‍ಇಂಗ್ಲಿಷ್‌ ಪರೀಕ್ಷೆ ನಡೆಯಲಿರುವುದರಿಂದ ಜಿಲ್ಲೆಯಲ್ಲಿರುವ ಎಲ್ಲ 16 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್‌ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು, ಸೇವಾ ಭಾರತಿ ಪದವಿ ಪೂರ್ವ ಕಾಲೇಜು, ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು, ಗುಂಡ್ಲುಪೇಟೆ ಪಟ್ಟಣದ ದೊಡ್ಡಹುಂಡಿ ಬೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು, ಕೆಎಸ್ ನಾಗರತ್ನಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್‌ವಿಕೆವಿ ಸರ್ಕಾರಿ ಪದವಿ ಪೂರ್ವ ಕಾಲೇಜು, ನಿಸರ್ಗ ಪದವಿ ಪೂರ್ವ ಕಾಲೇಜು, ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು, ಲಯನ್ಸ್ ಪದವಿ ಪೂರ್ವ ಕಾಲೇಜು, ಹನೂರು ಪಟ್ಟಣದ ಜಿ.ವಿ. ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜು, ರಾಮಾಪುರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಕಲಂ ಅನ್ವಯ ನಿಷೇದಾಜ್ಞೆ ಹೊರಡಿಸಲಾಗಿದೆ. ಅಲ್ಲದೆ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಮುಚ್ಚಲು ಆದೇಶಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.