ADVERTISEMENT

ಚಾಮರಾಜನಗರ: ಕೇವಲ ಏಳು ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 15:26 IST
Last Updated 17 ಆಗಸ್ಟ್ 2021, 15:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಏಳು ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 19 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 169 ಮಂದಿ ಕೋವಿಡ್‌ನಿಂದ ಬಳಲುತ್ತಿದ್ದಾರೆ. ಐವರು ಐಸಿಯುನಲ್ಲಿದ್ದಾರೆ. 32 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ, ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಪ್ರಕರಣಗಳ ಸಂಖ್ಯೆ 32,227ಕ್ಕೆ ಏರಿದೆ. 31,527 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮಂಗಳವಾರ 850 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 844 ವರದಿಗಳು ನೆಗೆಟಿವ್‌ ಬಂದಿವೆ. ಆರು ಮಂದಿಗೆ ಸೋಂಕು ದೃಢಪಟ್ಟಿದೆ. ಹಳೆಯ ಒಂದು ಪ್ರಕರಣ ಸೇರಿ ಏಳು ಪ್ರಕರಣಗಳನ್ನು ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.