ADVERTISEMENT

ಚಾಮರಾಜನಗರ: 17 ಹೊಸ ಪ್ರಕರಣ, 16 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 12:46 IST
Last Updated 3 ಡಿಸೆಂಬರ್ 2020, 12:46 IST
ಸಾಂದರ್ಭಿಕ
ಸಾಂದರ್ಭಿಕ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 17 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 16 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,379ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,176ಕ್ಕೆ ಹಿಗ್ಗಿದೆ. ಸದ್ಯ 75 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 35 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 10 ಮಂದಿ ಐಸಿಯುನಲ್ಲಿದ್ದಾರೆ.

ಕೋವಿಡ್‌ನಿಂದಾಗಿ 108 ಮಂದಿ ಹಾಗೂ ಇತರ ಅನಾರೋಗ್ಯಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಗುರುವಾರ 1,151 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,134 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.