ADVERTISEMENT

ಚಾಮರಾಜನಗರ: 17 ಹೊಸ ಪ್ರಕರಣ ದೃಢ, ಆರು ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 14:09 IST
Last Updated 21 ನವೆಂಬರ್ 2020, 14:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 17 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 88ಕ್ಕೆ ಏರಿದೆ.

ಶುಕ್ರವಾರಕ್ಕೆ ಹೋಲಿಸಿದರೆ ದೃಢಪಟ್ಟ ಪ್ರಕರಣಗಳ ಸಂಖ್ಯೆ ಮೂರು ಕಡಿಮೆಯಾಗಿದೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 6,245 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. 6,030 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ 19 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಸದ್ಯ ಚಿಕಿತ್ಸೆ ಪಡೆಯುತ್ತಿರುವ 88 ಮಂದಿಯ ಪೈಕಿ 35 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 14 ಜನರಿದ್ದಾರೆ.

ಶನಿವಾರ 1,218 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1,203 ಮಂದಿಯ ವರದಿ ನೆಗೆಟಿವ್‌ ಬಂದಿವೆ. 15 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣ ಮೈಸೂರಿನಲ್ಲಿ ದೃಢ‍ಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.