ADVERTISEMENT

ಚಾಮರಾಜನಗರ: 17 ಹೊಸ ಪ್ರಕರಣ, 10 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 13:26 IST
Last Updated 15 ಡಿಸೆಂಬರ್ 2020, 13:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 17 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 10 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ 100ಕ್ಕೆ ತಲುಪಿದೆ. ಈ ಪೈಕಿ ಹೋಂ ಐಸೊಲೇಷನ್‌ನಲ್ಲಿ 60 ಮಂದಿ ಇದ್ದಾರೆ. ಐಸಿಯುನಲ್ಲಿ ನಾಲ್ವರು ಇದ್ದಾರೆ.

ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,554ಕ್ಕೆ ಏರಿದೆ.ಗುಣಮುಖರಾದವರ ಸಂಖ್ಯೆ 6,326ಕ್ಕೆ ತಲುಪಿದೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಮಂಗಳವಾರ 1,056 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1040 ಮಂದಿಯ ವರದಿ ನೆಗೆಟಿವ್‌ ಬಂದಿವೆ. 16 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.