ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 11 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 18 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 75 ಸಕ್ರಿಯ ಪ್ರಕರಣಗಳಿವೆ.
ಸೋಂಕಿತರ ಪೈಕಿ 48 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಇಬ್ಬರು ಐಸಿಯುನಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 6,771 ಮಂದಿಗೆ ಸೋಂಕು ದೃಢಪಟ್ಟಿದೆ. 6,565 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣಗಳಿಂದ ಮೃತಪಟ್ಟಿದ್ದಾರೆ.
ದಾಖಲೆಯ ಪರೀಕ್ಷೆ: ಶುಕ್ರವಾರ 1955 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ 1944 ವರದಿಗಳು ನೆಗೆಟಿವ್ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.