ADVERTISEMENT

ಚಾಮರಾಜನಗರ: 74 ಹೊಸ ಪ್ರಕರಣ, 52 ಮಂದಿ ಸೋಂಕು ಮುಕ್ತ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 13:46 IST
Last Updated 21 ಅಕ್ಟೋಬರ್ 2020, 13:46 IST
ಚಾಮರಾಜನಗರದ ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ಕೋವಿಡ್‌ ಪರೀಕ್ಷೆ ನಡೆಸಲು ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು 
ಚಾಮರಾಜನಗರದ ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ಕೋವಿಡ್‌ ಪರೀಕ್ಷೆ ನಡೆಸಲು ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು    

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 74 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 52 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಈವರೆಗೆ 5,625 ಪ್ರಕರಣಗಳು ದೃಢಪ‍ಟ್ಟಿವೆ. 4,844 ಮಂದಿ ಗುಣಮುಖರಾಗಿದ್ದಾರೆ. 662 ಸಕ್ರಿಯ ಪ್ರಕರಣಗಳಿವೆ. 225 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 39 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಡಳಿತ ನೀಡಿರುವ ಅಂಕಿ ಅಂಶಗಳ ಪ್ರಕಾರ,ಕೋವಿಡ್‌ನಿಂದಾಗಿ 107 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ಯೇತರ ಕಾರಣದಿಂದ 12 ಮಂದಿ ಕೊನೆಯುಸಿರೆಳೆದಿದ್ದಾರೆ.

ADVERTISEMENT

ಬುಧವಾರ 1,007 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, 936 ಮಂದಿಯ ವರದಿ ನೆಗೆಟಿವ್‌ ಬಂದಿವೆ. 71 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಮೂರು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ಚಾಮರಾಜನಗರ ತಾಲ್ಲೂಕಿನಲ್ಲಿ 10, ಗುಂಡ್ಲುಪೇಟೆಯಲ್ಲಿ ಏಳು ಮಂದಿ, ಕೊಳ್ಳೇಗಾಲದಲ್ಲಿ ನಾಲ್ವರು, ಯಳಂದೂರು ತಾಲ್ಲೂಕಿನಲ್ಲಿ ಮೂವರು ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.