ADVERTISEMENT

ಚಾಮರಾಜನಗರ: 73 ಹೊಸ ಕೋವಿಡ್‌ ಪ್ರಕರಣ, 64 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 6:07 IST
Last Updated 12 ಅಕ್ಟೋಬರ್ 2020, 6:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 73 ಮಂದಿ ಕೋವಿಡ್‌–19 ಇರುವುದು ದೃಢಪಟ್ಟಿದೆ. 64 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಯೇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ಹನೂರಿನ 30 ವರ್ಷದ ಮಹಿಳೆಯೊಬ್ಬರು ಕಿಡ್ನಿ ಸಮಸ್ಯೆ ಹಾಗೂ ಕ್ಷಯ ರೋಗದಿಂದ ಬಳಲುತ್ತಿದ್ದರು. ಅ.8ರಂದು ಚಿಕಿತ್ಸೆಗಾಘಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಮೃತಪಟ್ಟಿದ್ದರು.ನಂತರ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ ಕಾರಣದಿಂದ 74 ಹಾಗೂ ಕೋವಿಡ್‌ ಯೇತರ ರೋಗಗಳಿಂದಾಗಿ 30 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಭಾನುವಾರದ 73 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 4,926 ಪ್ರಕರಣಗಳು ವರದಿಯಾಗಿವೆ. 4,110 ಮಂದಿ ಗುಣಮುಖರಾಗಿದ್ದಾರೆ. 712 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 212 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 36 ಮಂದಿ ಐಸಿಯುನಲ್ಲಿದ್ದಾರೆ.

ಭಾನುವಾರ 1,043 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 972 ವರದಿಗಳು ನೆಗೆಟಿವ್‌ ಬಂದಿವೆ. 71 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.