ADVERTISEMENT

ಸಿದ್ದರಾಮಯ್ಯ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಶ್ರೀನಿವಾಸ ಪ್ರಸಾದ್‌ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 14:47 IST
Last Updated 29 ಅಕ್ಟೋಬರ್ 2020, 14:47 IST
ವಿ.ಶ್ರೀನಿವಾಸ ಪ್ರಸಾದ್‌
ವಿ.ಶ್ರೀನಿವಾಸ ಪ್ರಸಾದ್‌   

ಕೊಳ್ಳೇಗಾಲ: ‘ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದ್ದರೂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಗಲೇ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ವ್ಯಂಗ್ಯವಾಡಿದರು.

ನಗರದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿಯಾಗಿದ್ದವರು ಯಾರೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಿಲ್ಲ. ಸಿದ್ದರಾಮಯ್ಯ ಅವರು ಎರಡು ಕಡೆ ಸ್ಪರ್ಧಿಸಿದ್ದರು. ಮೈಸೂರಿನಲ್ಲಿ ಮಾತ್ರ ನಿಂತು ಸೋತಿದ್ದರೆ ಸಿದ್ದರಾಮಯ್ಯ ಅವರು ಕೂಡ ಎಚ್‌.ಸಿ.ಮಹದೇವಪ್ಪ ಮತ್ತು ಧ್ರುವನಾರಾಯಣ ಅವರಂತೆ ಅವಿತುಕೊಂಡಿರುತ್ತಿದ್ದರು. ಪತ್ತೆನೇ ಇರುತ್ತಿರಲಿಲ್ಲ. ಏನೋ, ಬಾದಾಮಿಗೆ ಹೋಗಿ ಗೆದ್ದುಕೊಂಡಿದ್ದಾರೆ. ಅತ್ತು ಕರೆದು ವಿರೋಧ ಪಕ್ಷದ ನಾಯಕರೂ ಆಗಿದ್ದಾರೆ. ಅವರು ಈಗ ತಮಗಿರುವ ಜವಾಬ್ದಾರಿಯಷ್ಟು ಕೆಲಸ ಮಾಡಿಕೊಂಡು ಹೋಗಲಿ’ ಎಂದು ಕುಟುಕಿದರು.

‘ರಾಜ್ಯದಲ್ಲಿ ಬಿಜೆಪಿಯ ಸ್ಥಿರ ಸರ್ಕಾರ ಇದೆ. ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ. ಅವರು ಚುನಾವಣಾ ಪ್ರಚಾರದಲ್ಲಿ ಮಾತನಾಡಲಿ. ಜನ ಅವರು ಬೇಕು ಎಂದು ಇಷ್ಟಪಟ್ಟರೆ ಅಥವಾ ಪಕ್ಷದವರು ಇಷ್ಟಪಟ್ಟರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಆಗಲಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.