ADVERTISEMENT

ಚಾಮರಾಜನಗರ: ಆರಕ್ಕೆ ಇಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 3:27 IST
Last Updated 14 ಫೆಬ್ರುವರಿ 2021, 3:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಐವರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಇಬ್ಬರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಆರಕ್ಕೆ ಇಳಿದಿದೆ.

ಸೋಂಕಿತರ ಪೈಕಿ ಮೂರು ಜನ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,924ಕ್ಕೆ ಏರಿದ್ದು, ಗುಣಮುಖರಾದವರ ಸಂಖ್ಯೆ 6,786ಕ್ಕೆ ಹಿಗ್ಗಿದೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.

ಶನಿವಾರ 600 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 598 ವರದಿಗಳು ನೆಗೆಟಿವ್‌ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.