
ಹನೂರು ತಾಲ್ಲೂಕಿನ ಶೆಟ್ಟಳ್ಳಿಯಲ್ಲಿ ಮೃತಪಟ್ಟಿರುವ ಹಸುಗಳು
ಹನೂರು: ತಾಲ್ಲೂಕಿನ ಶೆಟ್ಟಳ್ಳಿಯಲ್ಲಿ ಪರಶಿವಮೂರ್ತಿ ಅವರಿಗೆ ಸೇರಿದ 6 ಹಸುಗಳು ಬುಧವಾರ ಅನುಮಾನಾಸ್ಪದವಾಗಿ ಮೃತಪಟ್ಟಿವೆ.
ಪರಶಿವಮೂರ್ತಿ ಅವರು ಜಮೀನಿನಲ್ಲಿ ಹಸುಗಳನ್ನು ಮೇಯಲು ಬಿಟ್ಟಿದ್ದಾಗ ಏಕಾಏಕಿ ಮೇಯುತ್ತಿದ್ದ ಸ್ಥಳದಲ್ಲಿಯೇ ಬಿದ್ದು ಮೃತಪಟ್ಟಿವೆ. ‘ಮೇಲ್ನೋಟಕ್ಕೆ ಯಾರೋ ಕಿಡಿಗೇಡಿಗಳು ವಿಷ ಹಾಕಿ ಹಸುಗಳನ್ನು ಕೊಂದಿದ್ದಾರೆ. ಹಸುಗಳ ಬಾಯಲ್ಲಿ ನೊರೆ ತುಂಬಿಕೊಂಡು ಹೊಟ್ಟೆ ಊದಿ ಕೊಂಡಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು. ಜೊತೆಗೆ ಸೂಕ್ತ ಪರಿಹಾರ ಕೊಡಬೇಕು’ ಎಂದು ಮನವಿ ಮಾಡಿದ್ದಾರೆ.
ಪಶು ವೈದ್ಯಾಧಿಕಾರಿ ಸಿದ್ದರಾಜು ಮಾತನಾಡಿ, ‘ವಿಷಪೂರಿತ ಆಹಾರ ಅಥವಾ ವಿಷಮಿಶ್ರಿತ ನೀರನ್ನು ಕುಡಿದು ಹಸುಗಳು ಸಾವನ್ನಪ್ಪಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿ ಹಸುವಿನ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. 15 ದಿನಗಳಲ್ಲಿ ವರದಿ ಬರಲಿದೆ, ನಂತರ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.