ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಆರು ಮಂದಿಗೆ ಕೋವಿಡ್ ದೃಢಪಟ್ಟಿದೆ. ಒಂಬತ್ತು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.
ಸಕ್ರಿಯ ಪ್ರಕರಣಗಳ ಸಂಖ್ಯೆ 43ಕ್ಕೆ ಇಳಿದಿದೆ.ಸೋಂಕಿತರಲ್ಲಿ ಇಬ್ಬರು ಐಸಿಯುನಲ್ಲಿದ್ದಾರೆ. 15 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,399ಕ್ಕೆ ಏರಿದೆ. 31,818 ಮಂದಿ ಗುಣಮುಖರಾಗಿದ್ದಾರೆ.
ಭಾನುವಾರ 886 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 877 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಂಬತ್ತು ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ ಮೂರು ಪ್ರಕರಣ ಹೊರ ಜಿಲ್ಲೆಗೆ ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.