ADVERTISEMENT

ಚಾಮರಾಜನಗರ: 6 ಹೊಸ ಪ್ರಕರಣ, 19 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 17:26 IST
Last Updated 23 ನವೆಂಬರ್ 2020, 17:26 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ದೃಢಪಟ್ಟ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಕಡಿಮೆಯಾಗಿದೆ. ಸೋಮವಾರ ಆರು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 19 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 81ಕ್ಕೆ ಇಳಿದಿದೆ. 52 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 14 ರೋಗಿಗಳು ಐಸಿಯುನಲ್ಲಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 6,264 ಪ್ರಕರಣಗಳು ದೃಢಪಟ್ಟಿದ್ದರೆ, 6,055 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನ ಕಾರಣದಿಂದ 108 ಹಾಗೂ ಬೇರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಸೋಮವಾರ 438 ಕೋವಿಡ್‌ ಪರೀಕ್ಷೆಗಳ ವರದಿ ಬಂದಿದ್ದು, 433 ವರದಿಗಳು ನೆಗೆಟಿವ್‌ ಬಂದಿವೆ. ಐದು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.