ADVERTISEMENT

6 ಮಂದಿಗೆ ಸೋಂಕು, ಮೂವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 5:22 IST
Last Updated 14 ಸೆಪ್ಟೆಂಬರ್ 2021, 5:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಆರು ಹೊಸ ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಗುಣಮುಖರಾದವರ ಸಂಖ್ಯೆ ಇಳಿದಿದ್ದು, ಮೂವರು ಮಾತ್ರ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳು 46ಕ್ಕೆ ಏರಿವೆ.ಇಬ್ಬರು ಐಸಿಯುನಲ್ಲಿದ್ದಾರೆ. 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,405 ಮಂದಿಗೆ ಸೋಂಕು ತಗುಲಿದೆ. 31,821 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಸೋಮವಾರ 1,687 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,681 ಮಂದಿಯ ವರದಿ ನೆಗೆಟಿವ್‌ ಬಂದಿವೆ. ಆರು ಪ‍್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.