ADVERTISEMENT

ಚಾಮರಾಜನಗರ: 16 ಹೊಸ ಪ್ರಕರಣ, 8 ಮಂದಿ ಸೋಂಕು ಮುಕ್ತ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 15:56 IST
Last Updated 2 ಡಿಸೆಂಬರ್ 2020, 15:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 16 ಹೊಸ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 74 ಮಂದಿ ಸೋಂಕಿತರಿದ್ದು, 45 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 6,312ಕ್ಕೆ ಏರಿದೆ. 6,160 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಬುಧವಾರ 912 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 899 ಮಂದಿಯ ವರದಿ ನೆಗೆಟಿವ್‌ ಬಂದಿವೆ. 13 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.