ADVERTISEMENT

ಚಾಮರಾಜನಗರ: ಒಂದೇ ದಿನ 16 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 15:46 IST
Last Updated 1 ಏಪ್ರಿಲ್ 2021, 15:46 IST
45 ವರ್ಷದ ಎಲ್ಲರಿಗೂ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಜಿಲ್ಲೆಯಲ್ಲಿ ಗುರುವಾರ ಚಾಲನೆ ದೊರೆತಿದ್ದು, ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಲಸಿಕೆ ಹಾಕಿಸಿಕೊಂಡರು
45 ವರ್ಷದ ಎಲ್ಲರಿಗೂ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಜಿಲ್ಲೆಯಲ್ಲಿ ಗುರುವಾರ ಚಾಲನೆ ದೊರೆತಿದ್ದು, ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಲಸಿಕೆ ಹಾಕಿಸಿಕೊಂಡರು   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 16 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಎರಡು ಪ್ರಕರಣಗಳು ಮೈಸೂರಿನಲ್ಲಿ ಖಚಿತವಾಗಿವೆ. ಮೂವರಷ್ಟೇ ಗುಣಮುಖರಾಗಿದ್ದಾರೆ.

ಹಲವು ವಾರಗಳ ಬಳಿಕ ಜಿಲ್ಲೆಯಲ್ಲಿ ಒಂದೇ ದಿನ ಎರಡಂಕಿಯ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿದೆ. ಈ ಪೈಕಿ 23 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಗುರುವಾರ 1,360 ಮಂದಿ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ 1,345 ಮಂದಿಯ ವರದಿ ನೆಗೆಟಿವ್‌ ಬಂದಿದೆ.

ADVERTISEMENT

ದೃಢಪಟ್ಟ 16 ಪ್ರರಕಣಗಳ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ ಎಂಟು, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಾಲ್ಕು, ಹನೂರು ತಾಲ್ಲೂಕಿನಲ್ಲಿ ಎರಡು, ಯಳಂದೂರು ಮತ್ತು ಕೊಳ್ಳೇಗಾಲ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.