ADVERTISEMENT

ಚಾಮರಾಜನಗರ: 67ಕ್ಕೆ ಕುಸಿದ ಸಕ್ರಿಯ ಪ್ರಕರಣಗಳ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 13:19 IST
Last Updated 30 ನವೆಂಬರ್ 2020, 13:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 19 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಐದು ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕು ಮುಕ್ತರಾದವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 67 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 45 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 11 ಮಂದಿ ಇದ್ದಾರೆ.

ಸೋಮವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 6,328ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,133ಕ್ಕೆ ತಲುಪಿದೆ.

ADVERTISEMENT

ಕೋವಿಡ್‌ ಕಾರಣದಿಂದ ಇದುವರೆಗೆ 108 ಮಂದಿ ಹಾಗೂ ಇತರ ಅನಾರೋಗ್ಯಗಳಿಂದಾಗಿ 20 ಮಂದಿ ಮೃತಪಟ್ಟಿದ್ದಾರೆ.

ಸೋಮವಾರ 423 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 418 ಮಂದಿಯ ವರದಿ ನೆಗೆಟಿವ್‌ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.