ADVERTISEMENT

63 ಹೊಸ ಪ್ರಕರಣ, 98 ಮಂದಿ ಸೋಂಕು ಮುಕ್ತ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 17:02 IST
Last Updated 24 ಜೂನ್ 2021, 17:02 IST
ಚಾಮರಾಜನಗರ ನಗರಸಭೆಯ 5ನೇ ವಾರ್ಡ್‌ನಲ್ಲಿ ಕೋವಿಡ್‌ ಲಸಿಕಾ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು
ಚಾಮರಾಜನಗರ ನಗರಸಭೆಯ 5ನೇ ವಾರ್ಡ್‌ನಲ್ಲಿ ಕೋವಿಡ್‌ ಲಸಿಕಾ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 63 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 98 ಮಂದಿ ಗುಣಮುಖರಾಗಿದ್ದಾರೆ.

24 ಗಂಟೆಗಳ ಅವಧಿಯಲ್ಲಿ ಮೂವರು ಕೋವಿಡ್‌ನಿಂದ, ಇಬ್ಬರು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವರದಿ ಹೇಳಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 747ಕ್ಕೆ ಇಳಿದಿದೆ. ಸೋಂಕಿತರ ಪೈಕಿ 42 ಮಂದಿ ಐಸಿಯುನಲ್ಲಿ ಹಾಗೂ 15 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ADVERTISEMENT

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,469ಕ್ಕೆ ಏರಿದೆ. 29,231 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ 540ಕ್ಕೆ ಏರಿದೆ.

ಗುರುವಾರ 1,645 ಮಂದಿಯ ಪರೀಕ್ಷಾ ವರದಿ ಬಂದಿದ್ದು, 1,578 ವರದಿಗಳು ನೆಗೆಟಿವ್‌ ಬಂದಿವೆ. 67 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲಾಡಳಿತ 63 ಮಂದಿಯನ್ನು ಮಾತ್ರ ಉಲ್ಲೇಖಿಸಿದೆ.

63ಸೋಂಕಿತರ ಪೈಕಿ ಚಾಮರಾಜನಗರ ತಾಲ್ಲೂಕಿನ 25, ಗುಂಡ್ಲುಪೇಟೆಯ 12, ಕೊಳ್ಳೇಗಾಲದ ಆರು, ಹನೂರಿನ 16 ಹಾಗೂ ಯಳಂದೂರು ತಾಲ್ಲೂಕಿನ ಮೂವರು ಹಾಗೂ ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.

ಗುಣಮುಖರಾದ 98 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 33, ಗುಂಡ್ಲುಪೇಟೆಯ 25, ಕೊಳ್ಳೇಗಾಲದ 24, ಹನೂರಿನ 12 ಹಾಗೂ ಯಳಂದೂರು ತಾಲ್ಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಮೂವರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.