ಚಾಮರಾಜನಗರ: ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವಿದ್ಯಾರ್ಥಿಗಳು ಸ್ಕೇಟಿಂಗ್ ಮ್ಯಾರಥಾನ್ ನಡೆಸಿದರು.
ನಗರದ ಸುಲ್ತಾನ್ ಷರೀಪ್ ವೃತ್ತದಲ್ಲಿ ಜಿಲ್ಲಾ ನೆಟ್‌ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಬಾನು ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿರುವ ಕಾಲಘಟ್ಟದಲ್ಲಿ ಮಕ್ಕಳು ಸ್ಕೇಟಿಂಗ್‌ನಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳು ಚಾಮರಾಜನಗರದಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ, ಸ್ಕೇಟಿಂಗ್, ಕರಾಟೆ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.
ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ನಗರದಲ್ಲಿ ಈಚೆಗೆ ಹೆಚ್ಚು ಕ್ರೀಡಾಕೂಟಗಳ ಆಯೋಜನೆ ನಡೆಯುತ್ತಿದ್ದು ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಕೇಟಿಂಗ್, ಕರಾಟೆ ಕ್ರೀಡಾಂಗಣ ನಿರ್ಮಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಚಾಮರಾಜನಗರದ ಸುಲ್ತಾನ್ ಷರೀಪ್ ವೃತ್ತದಿಂದ ಆರಂಭವಾದ ಮ್ಯಾರಥಾನ್, ದೊಡ್ಡಂಗಡಿಬೀದಿ, ಅಗ್ರಹಾರಬೀದಿ, ಡಿವಿಯೇಷನ್ ರಸ್ತೆ ಮೂಲಕ ಮರಳಿ ಸುಲ್ತಾನ್ ಷರೀಪ್ ವೃತ್ತದಲ್ಲಿ ಮುಕ್ತಾಯಗೊಂಡಿತು.
ಇದೇ ಸಂದರ್ಭದಲ್ಲಿ ರೆಹ್ಬರ್ ಅಸೋಸಿಯೇಷನ್ ಅಧ್ಯಕ್ಷ ಪುರ್ಕಾನ್ ಪಾಷಾ ಅಜೀಂ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.