ADVERTISEMENT

ಸೋಲಾರ್ ಬೇಲಿ ಅಳವಡಿಸಲು ಗ್ರಾಮಸ್ಥರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 5:25 IST
Last Updated 18 ಡಿಸೆಂಬರ್ 2025, 5:25 IST
ಸಂತೇಮರಹಳ್ಳಿ ಸಮೀಪದ ಉಮ್ಮತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕ್ರಿಯಾ ಯೋಜನೆ ತಯಾರಿ ಸಂಬಂಧ ನಡೆದ ಗ್ರಾಮಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಹದೇವಪ್ರಭು ಮಾತನಾಡಿದರು 
ಸಂತೇಮರಹಳ್ಳಿ ಸಮೀಪದ ಉಮ್ಮತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕ್ರಿಯಾ ಯೋಜನೆ ತಯಾರಿ ಸಂಬಂಧ ನಡೆದ ಗ್ರಾಮಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಹದೇವಪ್ರಭು ಮಾತನಾಡಿದರು    

ಪ್ರಜಾವಾಣಿ ವಾರ್ತೆ

ಸಂತೇಮರಹಳ್ಳಿ: ಚರಂಡಿ ಸಮಸ್ಯೆ, ಕಾಡು ಪ್ರಾಣಿಗಳ ಹಾವಳಿ, ಕಾಮಗಾರಿ ಬಿಲ್ ಬಾಕಿ, ಕಾಲುವೆ ಒತ್ತುವರಿ, ಬಡಾವಣೆ ಅಭಿವೃದ್ಧಿ, ಅರಣ್ಯ ಇಲಾಖೆ ಆಸ್ತಿ ಒತ್ತುವರಿ ಸೇರಿ ಅನೇಕ ದೂರುಗಳು ಗ್ರಾಮಸಭೆಯಲ್ಲಿ ಕೇಳಿ ಬಂದವು.

ಸಮೀಪದ ಉಮ್ಮತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ನಡೆದ 2026–27 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕ್ರಿಯಾ ಯೋಜನೆ ತಯಾರಿ ಗ್ರಾಮಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ದೂರಿದರು.

ADVERTISEMENT

ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೈತರು ಬಾಳೆ, ಟೊಮೆಟೊ, ಹಸಿ ಕಡ್ಲೆ, ಮೆಣಸಿ, ಹುರುಳಿ ಸೇರಿ ವಿವಿಧ ಬೆಳೆಗಳನ್ನು ಬೆಳೆದಿದು, ಕೃಷ್ಣಮೃಗ, ಕಾಡು ಹಂದಿ, ನವಿಲುಗಳ ಹಾವಾಳಿಯಿಂದ ರೈತರು ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ. ಈ ನಿಮಿತ್ತ ರೈತರ ಜಮೀನುಗಳಲ್ಲಿ ಸೋಲಾರ್ ಅಳವಡಿಸಿಕೊಳ್ಳಲು ಅರಣ್ಯ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಸೋಲಾರ್ ಒದಗಿಸಿಕೊಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮಾಡಬೇಕು. ಗ್ರಾಮದ ಸುತ್ತ ಇರುವ ಅರಣ್ಯ ವ್ಯಾಪ್ತಿಯಲ್ಲಿ ಸೋಲಾರ್ ಅಳವಡಿಸಿ, ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಡಿಆರ್‌ಎಫ್‌ಒ ಅಮರ್‌ನಾಥ್ ಮಾತನಾಡಿ, ವನ್ಯಧಾಮ ಅರಣ್ಯ ಪ್ರದೇಶವಿರುವ ಕಡೆಗಳಲ್ಲಿ ಮಾತ್ರ ಅರಣ್ಯ ಇಲಾಖೆ ವತಿಯಿಂದ ಸೋಲಾರ್ ತಂತಿ ಅಳವಡಿಸಲು ಮಾತ್ರ ಸಾಧ್ಯವಾಗಿದೆ. ಗ್ರಾಮದ ಸುತ್ತ ಅರಣ್ಯ ಪ್ರದೇಶದಲ್ಲಿ ಸೋಲಾರ್ ಅಳವಡಿಸಲು ಸಾಧ್ಯವಿಲ್ಲ. ಗ್ರಾಮದಲ್ಲಿ ಕಾಡು ಪ್ರಾಣಿಗಳು ಬೆಳೆ ಹಾನಿ ಮಾಡಿರುವ ಸಂಬಂಧ ಈಗಾಗಲೇ ಹಲವು ರೈತರಿಗೆ ಬೆಳೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಪ್ರಭು ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆ ಪೂರಕವಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿರುವ ನಿಮಿತ್ತ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮೇಘನಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ರಾಜೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ನಂಜುಂಡಶೆಟ್ಟಿ, ಸದಸ್ಯರು, ಕಾರ್ಯದರ್ಶಿ ಶಿವಯ್ಯ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಅಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.