ಗುಂಡ್ಲುಪೇಟೆ: ಆಷಾಢ ಮಾಸದ ಕೊನೆ ಶುಕ್ರವಾರ ಪ್ರಯುಕ್ತ ಪಟ್ಟಣದ ಗ್ರಾಮ ದೇವತೆ ಪಟ್ಟಲದಮ್ಮ ದೇವಸ್ಥಾನಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಪಟ್ಟಲದಮ್ಮ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಪೂಜೆಯಲ್ಲಿ ಮೂಲ ವಿಗ್ರಹಕ್ಕೆ ಆರು ಗಂಟಟೆಯಿಂದಲೇ ಬೆಣ್ಣೆ ಅಲಂಕಾರ ಮಾಡಿ, ಪ್ರತಿಷ್ಠಾಪನಾ ಮೂರ್ತಿಗೆ 8 ಸೀರೆಗಳಿಂದ ಸಿಂಗರಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ದೇಗುಲಕ್ಕೆ ಪಟ್ಟಣ ಸೇರಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು. ನಂತರ ಉತ್ಸವ ಮೂರ್ತಿ ತೆರೆದ ವಾಹನದಲ್ಲಿರಿಸಿ ರಾಷ್ಟ್ರೀಯ ಹೆದ್ದಾರಿ, ಕಿತ್ತೂರು ರಾಣಿ ಚನ್ನಮ್ಮ ರಸ್ತೆ, ನಾಯಕರ ಬೀದಿ ಸೇರಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
10 ಸಾವಿರ ಮಂದಿಗೆ ಪ್ರಸಾದ ವಿನಿಯೋಗ: ಪಟ್ಟಲದಮ್ಮ ಸೇವಾ ಸಮಿತಿಯಿಂದ ವಿಶೇಷ ಪೂಜೆ ಪ್ರಯುಕ್ತ ದೇಗುಲದ ಆವರಣದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.