ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭಾನುವಾರ ರಾಮನವಮಿ ಆಚರಣೆ ಅದ್ದೂರಿಯಾಗಿ ನಡೆಯಿತು.
ಅಂಬಳೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಬಗೆಬಗೆ ಹೂಗಳಿಂದ ಅಲಂಕರಿಸಿ, ತಳಿರು ತೋರಣಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ ವಿತರಿಸಿ, ಅನ್ನಸಂತರ್ಪಣೆ ನೆರವೇರಿಸಲಾಯಿತು. ಬಡಾವಣೆಗಳಲ್ಲಿ ರಾಮನ ಫೋಟೊವನ್ನು ಮೆರವಣಿಗೆ ಮಾಡಲಾಯಿತು. ನಂತರ ಯುವಕರು ರಂಗು ಬಳಿದುಕೊಂಡು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.