ಯಳಂದೂರು: ಪಟ್ಟಣದ ತಿರುಮಲ ಶ್ರೀನಿವಾಸ ದೇವಾಲಯದಲ್ಲಿ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯ ಶನಿವಾರ ವಿಜೃಂಭಣೆಯಿಂದ ಜರುಗಿತು.
ಮುಂಜಾನೆಯಿಂದಲೇ ಭಕ್ತರು ಅಷ್ಟಮಾತೃಕೆಯರ ದೇವಳ, ಮಹಾಲಕ್ಷ್ಮಿ, ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ಹರಕೆ ಹೊತ್ತವರು ಹಣ್ಣು ಕಾಯಿ ಮಾಡಿಸಿದರು.
ಸಂಜೆ ಪಟ್ಟಣದಲ್ಲಿ ಶ್ರೀನಿವಾಸನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಂಗಳವಾದ್ಯ ಸಮೇತ ಮೆರವಣಿಗೆ ಮಾಡಲಾಯಿತು. ಭಕ್ತರು ಅನ್ನ ಸಂತರ್ಪಣೆ ಕಾರ್ಯದಲ್ಲಿ ಭಾಗಿಯಾದರು. ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.