
ಪ್ರಜಾವಾಣಿ ವಾರ್ತೆ
ಶ್ರೀರೂಪಾ
ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯನ್ನಾಗಿ ಶ್ರೀರೂಪಾ ಅವರನ್ನು ನೇಮಿಸಿದೆ.
ಶ್ರೀರೂಪಾ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯಕ್ತರ ಹುದ್ದೆಯನ್ನು ಶಿಲ್ಪಾನಾಗ್ ಅವರಿಗೆ ನೀಡಲಾಗಿದೆ. ಜೊತೆಗೆ ಹೆಚ್ಚುವರಿಯಾಗಿ ರೇಷ್ಮೆ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ. ಶಿಲ್ಪಾನಾಗ್ 2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಶ್ರೀರೂಪಾ 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.