ADVERTISEMENT

ಬಿಳಿಗಿರಿರಂಗನಬೆಟ್ಟ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಗರ್ಭಿಣಿ?

ಶಂಕೆ ಮೂಡಿಸಿದ ಅಧಿಕಾರಿಗಳ ಮೌನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 7:43 IST
Last Updated 16 ಡಿಸೆಂಬರ್ 2023, 7:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಬೆಟ್ಟದಲ್ಲಿರುವ, ಎಸ್‌ಎಸ್‌ಎಲ್‌ಸಿ ಓದುತ್ತಿರುವ ಗಿರಿಜನ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.

‘ಮೂರು ದಿನಗಳ ಹಿಂದೆಯೇ ಈ ಪ್ರಕರಣ ದೃಢಪಟ್ಟಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ’ ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ. 

ADVERTISEMENT

ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೊರ ತಾಲ್ಲೂಕಿನ ಆಸ್ಪತ್ರೆಯೊಂದರಲ್ಲಿ ತಪಾಸಣೆಗೆ ಒಳ‍ಪಡಿಸಿದಾಗ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದರಿಂದ, ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಅನುಮಾನವೂ ಮೂಡಿದೆ.  

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್‌ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್‌, ತಮ್ಮ ಬಳಿ ಮಾಹಿತಿ ಇಲ್ಲದಿರುವುದರಿಂದ, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ.  

ಸ್ಥಳೀಯವಾಗಿ ಈ ಸುದ್ದಿ ಹರಿದಾಡಿದ್ದು, ‘ಗಿರಿಜನರ ಸಂಪ್ರದಾಯದಲ್ಲಿ ಇದು ಸಾಮಾನ್ಯ ಎಂದು ಬಿಂಬಿಸುವ ಪ್ರಯತ್ನವೂ ನಡೆಯುತ್ತಿದೆ’ ಎಂಬ ಆರೋಪವೂ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.