ಕೊಳ್ಳೇಗಾಲ: ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಜೀವಂತ ನಕ್ಷತ್ರ ಆಮೆಯನ್ನು ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಶುಕ್ರವಾರ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು (35) ಬಂಧಿತ ಆರೋಪಿ.
ನಕ್ಷತ್ರ ಆಮೆಯನ್ನು ಒಂದು ಚೀಲದಲ್ಲಿಟ್ಟು ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಈತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.