ಕೊಳ್ಳೇಗಾಲ ಬೆಂಗಳೂರಿನ ಆಡುಗೋಡಿಯಲ್ಲಿ ಗುರುವಾರ ನಡೆದ ಶಾಲಾ ಪ್ರಾರಂಭೋತ್ಸವ 2025–26 ಕಾರ್ಯಕ್ರಮದಲ್ಲಿ ಮುಡಿಗುಂಡದ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕಿ ಆರ್.ಪ್ರಿಯದರ್ಶಿನಿಯವರನ್ನು ಸನ್ಮಾನಿಸಲಾಯಿತು.
ಕೊಳ್ಳೇಗಾಲ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ100 ರಷ್ಟು ಫಲಿತಾಂಶ ಸಾಧಿಸಿದ ಜಿಲ್ಲೆಯ ಏಕೈಕ ಮುಡಿಗುಂಡದ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ರಾಜ್ಯ ಸರ್ಕಾರದಿಂದ ಸನ್ಮಾನದ ಗೌರವ ಲಭಿಸಿದೆ.
ಬೆಂಗಳೂರಿನ ಆಡುಗೋಡಿಯಲ್ಲಿ ಗುರುವಾರ ನಡೆದ ಶಾಲಾ ಪ್ರಾರಂಭೋತ್ಸವ 2025–26 ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಶಾಲೆಯ ಮುಖ್ಯ ಶಿಕ್ಷಕಿ ಆರ್. ಪ್ರಿಯದರ್ಶಿನಿಯವರನ್ನು ಸನ್ಮಾನಿಸಿದ್ದಾರೆ.
ಶೇ100ರಷ್ಟು ಫಲಿತಾಂಶ ಪಡೆದ ಸರ್ಕಾರಿ ಪ್ರೌಢಶಾಲೆಗಳ ಪೈಕಿ ವಿಭಾಗವಾರು ಗರಿಷ್ಠ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಮಕ್ಕಳ ಸಂಖ್ಯೆಯನ್ನು ಆಧರಿಸಿ ರಾಜ್ಯದ ಒಟ್ಟು 10 ಸರ್ಕಾರಿ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು ಅದರಲ್ಲಿ ಸ್ಥಳೀಯ ಆದರ್ಶ ವಿದ್ಯಾಲಯ ಸಹ ಆಯ್ಕೆಯಾಗಿದೆ. ಹಾಗಾಗಿ ಸರ್ಕಾರದಿಂದ ಸನ್ಮಾನಗಳಿಸಿದ ಶಾಲೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶಾಲೆಯ ಎಸ್‌ಡಿಎಂಸಿ ಸದಸ್ಯರು ಪೋಷಕರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.