ADVERTISEMENT

ಆಗಸ್ಟ್ 10ರ ವೇಳೆಗೆ ಎಸ್ಸೆಸ್ಸೆಲ್ಸಿ ಫಲಿತಾಂಶ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 7:46 IST
Last Updated 23 ಜುಲೈ 2021, 7:46 IST
ಸುರೇಶ್ ಕುಮಾರ್
ಸುರೇಶ್ ಕುಮಾರ್   

ಚಾಮರಾಜನಗರ: ಆಗಸ್ಟ್ 10ರ ವೇಳೆಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ‘2021-22ನೇ ಸಾಲಿನ ಭೌತಿಕ ತರಗತಿಗಳನ್ನು ಆರಂಭಿಸುವ ಸಂಬಂಧ ಮುಂದಿನ ಸೋಮವಾರ ಸಭೆ ನಡೆಸಲಾಗುವುದು’ ಎಂದರು.

‘ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 2ಕ್ಕೆ ಮುಂದೂಡಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.