ADVERTISEMENT

ಲಾಕ್‌ಡೌನ್ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕು: ಎಸ್.ಸುರೇಶ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 7 ಮೇ 2021, 7:22 IST
Last Updated 7 ಮೇ 2021, 7:22 IST
ಎಸ್.ಸುರೇಶ್‌ಕುಮಾರ್
ಎಸ್.ಸುರೇಶ್‌ಕುಮಾರ್   

ಚಾಮರಾಜನಗರ: ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡುವ ಕುರಿತು ಅದರ ಸಾಧಕ ಬಾಧಕಗಳನ್ನು ಕುರಿತು ಚಿಂತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಇಲ್ಲಿ ಶುಕ್ರವಾರ ತಿಳಿಸಿದರು.

ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಜನತಾ ಕರ್ಫ್ಯೂವಿನಿಂದ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಸೋಂಕಿನ ಸರಪಳಿ ಕತ್ತರಿಸಲು ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಬೇಕು ಎಂಬ ಅಭಿಪ್ರಾಯ ವ್ಯಾಪಕವಾಗಿ ಕೇಳಿ ಬರುತ್ತಿದೆ. ಆದರೆ, ಇದರ ಜತೆಗೆ ನಾವು ಕೂಲಿ ಕಾರ್ಮಿಕರ ಪರಿಸ್ಥಿತಿಯ ಬಗ್ಗೆಯೂ ಗಮನ ಹರಿಸಬೇಕಿದೆ. ಮುಖ್ಯಮಂತ್ರಿಗಳ ನೇತೃತ್ವದ ಸಭೆಯು ಅಂತಿಮತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ಚಾಮರಾಜನಗರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 6 ಮಂದಿ ಕೋವಿಡ್ ರೋಗಿಗಳು ಮತ್ತು ಇಬ್ಬರು ಕೋವಿಡ್ ಇಲ್ಲದ ರೋಗಿಗಳು ಮೃತಪಟ್ಟಿದ್ದಾರೆ. ಸದ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.