ADVERTISEMENT

ಧರ್ಮ ಸಭೆಯಲ್ಲಿ ಭಾಗಿಯಾಗಿದ್ದವರ ಮಾದರಿ ಪರೀಕ್ಷೆಗೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 15:33 IST
Last Updated 3 ಏಪ್ರಿಲ್ 2020, 15:33 IST

ಚಾಮರಾಜನಗರ: ದೆಹಲಿಯ ನಿಜಾಮುದ್ದೀನ್‍ ಪ್ರದೇಶದಲ್ಲಿರುವ ತಬ್ಲೀಗಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಶುಕ್ರವಾರ ಮೈಸೂರಿನ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿದೆ.

‘ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಸೋಂಕು ದೃಢಪಟ್ಟ ಮೊದಲ ಸಿಬ್ಬಂದಿಯೊಂದಿಗೆ (ರೋಗಿ ಸಂಖ್ಯೆ 52) ಸಂಪರ್ಕ ಹೊಂದಿದ್ದ ವ್ಯಕ್ತಿಯ ಮಾದರಿಗಳ ಪರೀಕ್ಷಾ ವರದಿ ಇನ್ನೂ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

54 ಮಂದಿ: ಔಷಧ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ಮಂದಿ ಹಾಗೂ ವಿದೇಶದಿಂದ ಬಂದಿರುವ ಇಬ್ಬರನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.