ADVERTISEMENT

ಪರಿಸರ ಸಂರಕ್ಷಣೆಗೆ ಮುಂದಾಗಿ: ಶಾಸಕ ಎಚ್.ಎಂ.ಗಣೇಶಪ್ರಸಾದ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:25 IST
Last Updated 6 ಜೂನ್ 2025, 14:25 IST
ಗುಂಡ್ಲುಪೇಟೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು 
ಗುಂಡ್ಲುಪೇಟೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು    

ಗುಂಡ್ಲುಪೇಟೆ: ‘ತಾಲ್ಲೂಕು ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪರಿಣಾಮ ಉತ್ತಮ ಪರಿಸರವಿದ್ದು, ಶುದ್ದ ಗಾಳಿ ಸಿಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು’ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಉಪಾಧ್ಯಕ್ಷ ಸ್ಯೆದ್ ಮುಸ್ಸೇಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ವಿಶ್ವ, ಅನಂತ್, ಎಪಿಎಂಸಿ ಅಧ್ಯಕ್ಷ ನಾಗರಾಜು, ಹಾಪ್ ಕಾಮ್ಸ್ ಅಧ್ಯಕ್ಷ ನಾಗೇಶ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಆದರ್ಶ, ಉಪಾಧ್ಯಕ್ಷ ಮಾಡ್ರಹಳ್ಳಿ ಚಂದ್ರು, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿಶ್ವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ಹೂರದಹಳ್ಳಿ ರಾಜು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.