ADVERTISEMENT

ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 14:23 IST
Last Updated 7 ಜೂನ್ 2025, 14:23 IST
ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಶಾಸಕ ಎಂ ಆರ್ ಮಂಜುನಾಥ್ ಚರ್ಚಿಸಿದರು
ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಶಾಸಕ ಎಂ ಆರ್ ಮಂಜುನಾಥ್ ಚರ್ಚಿಸಿದರು   

ಮಹದೇಶ್ವರ ಬೆಟ್ಟ: ಪವಾಡ ಪುರುಷ ಮಹದೇಶ್ವರರು ತಪಸ್ಸು ಮಾಡಿದ ತಪೋಭೂಮಿ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಶಾಸಕ ಎಂಆರ್ ಮಂಜುನಾಥ್ ಹೇಳಿದರು.

ಮಹದೇಶ್ವರ ಬೆಟ್ಟದ ನಾಗಮಲೆ ಅತಿಥಿಗೃಹದ ಸಮೀಪದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು. ‘ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ವಿದ್ಯಾರ್ಥಿಗಳೇ ಧನ್ಯರು’ ಎಂದರು.

ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅವರಿಂದ ಕಾರ್ಯಕ್ರಮ ಸಂಬಂಧ ಅಗತ್ಯ ಮಾಹಿತಿ ಪಡೆದುಕೊಂಡರು. 

ADVERTISEMENT

ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ, ‘ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಬಂಧ ಪ್ರಾಧಿಕಾರದ ವತಿಯಿಂದ ವಸತಿ, ದರ್ಶನ, ದಾಸೋಹ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯ ಒದಗಿಸಿಕೊಡಲು ಈಗಾಗಲೇ ಚರ್ಚೆ ನಡೆಸಲಾಗಿದೆ’ ಎಂದರು.

ದೇವರಾಜು ಕಪ್ಪಸೋಗೆ ಮಾತನಾಡಿ, ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಿದ್ಧತೆಯ ಬಗ್ಗೆ ಈಗಾಗಲೇ ಎರಡು ಸಭೆ ನಡೆಸಲಾಗಿದ್ದು , ರೂಪುರೇಷೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹಲವು ಸಮಿತಿಗಳನ್ನು ರಚನೆ ಮಾಡಲಾಗಿದೆ’ ಎಂದರು.

ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಎಇಇ ಚಿನ್ನಣ್ಣ ಸೇರಿದಂತೆ ಇನ್ನಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.