ADVERTISEMENT

ಅಕ್ಟೋಬರ್–ನವೆಂಬರ್‌ಗೆ ತುಂಬುತ್ತಿದ್ದ ಮೆಟ್ಟೂರು ಜಲಾಶಯ ಜುಲೈಗೇ ಭರ್ತಿ

ಜುಲೈನಲ್ಲೇ ಭರ್ತಿಯಾದ ತಮಿಳುನಾಡಿನ ಅಣೆಕಟ್ಟು

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 15:25 IST
Last Updated 16 ಜುಲೈ 2022, 15:25 IST
ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯಾಗಿದ್ದು, ಎಲ್ಲ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ
ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯಾಗಿದ್ದು, ಎಲ್ಲ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ   

ಮಹದೇಶ್ವರ ಬೆಟ್ಟ: ರಾಜ್ಯದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ನದಿಗೆ ಹೆಚ್ಚುವರಿ ನೀರು ಬಿಡುತ್ತಿರುವುದರಿಂದ ನೆರೆಯ ತಮಿಳುನಾಡಿನ ಮೆಟ್ಟೂರು ಜಲಾಶಯ ಶನಿವಾರ ಭರ್ತಿಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ನವೆಂಬರ್‌ ಅವಧಿಯಲ್ಲಿ ಭರ್ತಿಯಾಗುತ್ತಿದ್ದ ಜಲಾಶಯ ಈ ಬಾರಿ ಜುಲೈನಲ್ಲೇ ತುಂಬಿದೆ. ಜಲಾಶಯದ 16 ಗೇಟ್‌ಗಳಿಂದಲೂ ನೀರು ನದಿಗೆ ಬಿಡಲಾಗುತ್ತಿದೆ.

120 ಅಡಿಗಳಷ್ಟು ಗರಿಷ್ಠ ಮಟ್ಟ ಹೊಂದಿರುವ ಮೆಟ್ಟೂರು ಜಲಾಶಯವು 93.4 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.

ADVERTISEMENT

ಮೂರು ದಿನಗಳಲ್ಲಿ ಜಲಾಶಯಕ್ಕೆ 15 ಅಡಿಗಳಷ್ಟು ನೀರು ಹರಿದು ಬಂದಿದೆ. ಬುಧವಾರ ಅಣೆಕಟ್ಟೆಯ ನೀರಿನ ಮಟ್ಟ 105.810 ಅಡಿಗಳಷ್ಟಿತ್ತು. ಶನಿವಾರ ಬೆಳಿಗ್ಗೆ ನೀರಿನ ಮಟ್ಟ 120 ಅಡಿ ತಲುಪಿದೆ. ಜಲಾಶಯದ ಒಳಹರಿವು 1.15 ಲಕ್ಷ ಕ್ಯುಸೆಕ್‌ನಷ್ಟಿದೆ. 50 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.