ADVERTISEMENT

ಲೈಂಗಿಕ ದೌರ್ಜನ್ಯ: ಶಿಕ್ಷಕನಿಗೆ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 5:48 IST
Last Updated 18 ಜನವರಿ 2026, 5:48 IST
ವೆಂಕಟನಾರಾಯಣ ಶಿಕ್ಷಕ
ವೆಂಕಟನಾರಾಯಣ ಶಿಕ್ಷಕ   

ಕೊಳ್ಳೇಗಾಲ: ವಿದ್ಯಾರ್ಥಿಯ ತಾಯಿ ಮೇಲೆ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ 3 ವರ್ಷ ಕಠಿಣ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ವೆಂಕಟನಾರಾಯಣ ಶಿಕ್ಷೆಗೊಳಗಾದ ಶಿಕ್ಷಕ. ಈತ ಹನೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ವಿದ್ಯಾರ್ಥಿಗಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪಡೆಯಲು ಬಾಲಕನ ತಾಯಿ ಬಂದಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರಗಳಿಂದ ಅಪರಾಧ ಸಾಬೀತಾದ ಹಿನ್ನೆಲೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಅವರು ಮೂರು ವರ್ಷ ಕಠಿಣ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಗಿರೀಶ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.