ADVERTISEMENT

ಶೈಕ್ಷಣಿಕ ಕ್ಷೇತ್ರದ ಪ್ರಗತಿ ಹಿಂದೆ ಶಿಕ್ಷಕರ ಶ್ರಮ ಅಪಾರ: ಶಾಸಕ ಪುಟ್ಟರಂಗಶೆಟ್ಟಿ

ಪ್ರತಿಭಾ ಪುರಸ್ಕಾರ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 5:55 IST
Last Updated 6 ಅಕ್ಟೋಬರ್ 2025, 5:55 IST
ಚಾಮರಾಜನಗರ ನಗರದ ಜೆಎಸ್‌ಎಸ್ ಸೆಮಿನಾರ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು
ಚಾಮರಾಜನಗರ ನಗರದ ಜೆಎಸ್‌ಎಸ್ ಸೆಮಿನಾರ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು   

ಚಾಮರಾಜನಗರ: ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದಾಗಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಶ್ರಮ ಅಪಾರ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜೆಎಸ್‌ಎಸ್ ಸೆಮಿನಾರ್ ಹಾಲ್‌ನಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ಸಮಾಜ ತಿದ್ದುವ ಹಾಗೂ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಸಮಾಜದಲ್ಲಿ ಹೆಚ್ಚಿನ ಗೌರವ ಸ್ಥಾನಮಾನ ಇದೆ. ಶಿಕ್ಷಕರು ಮಕ್ಕಳಿಗೆ ಪಾಠ ಮಾಡುವುದರ ಜೊತೆಗೆ ಶಿಸ್ತು, ಸಂಸ್ಕಾರವನ್ನೂ ಕಲಿಸುತ್ತಾರೆ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತಷ್ಟು ಶ್ರಮ ವಹಿಸಬೇಕು. ಈ ಬಾರಿ ಎಸ್‌ಎಸ್‌ಎಲ್‌ಸಿ , ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಪೂರಕವಾಗಿ ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಕರು ಜಿಲ್ಲೆಯ ಅಭಿವೃದ್ದಿಯ ಭಾಗಿದಾರರಾಗಿದ್ದಾರೆ. ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿ ಹೊಂದಿರುವ ಶಿಕ್ಷಕರು ಅಭಿನಂದನಾರ್ಹರು ಎಂದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಉತ್ತಮ ಭವಿಷ್ಯ, ಜೀವನ ರೂಫಿಸಿಕೊಳ್ಳಲು ಭದ್ರ ಅಡಿಪಾಯ ಹಾಕಬೇಕು. ಉತ್ತಮ ಫಲಿತಾಂಶ ಬರಲು ಹೆಚ್ಚು ಶ್ರಮ ಹಾಕಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಡಾ.ರೇಣುಕಾದೇವಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಮಾದಪ್ಪ, ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್, ಡಯಟ್ ಉಪನಿರ್ದೇಶಕ ಕಾಶೀನಾಥ್, ಸರ್ಕಾರಿ ನೌಕರರ ಸಂಘದ ಖಜಾಂಚಿ ಶಿವಕುಮಾರಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ. ಕಿರಣ್‌ರಾಜ್, ಮಾಜಿ ಅಧ್ಯಕ್ಷ ಸಿದ್ದಮಲ್ಲಪ್ಪ, ಉಪಾಧ್ಯಕ್ಷ ಶಾಂತರಾಜು, ಖಜಾಂಚಿ ಮಹೇಶ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಸಹ ಕಾರ್ಯದರ್ಶಿ ಗಜೇಂದ್ರ, ತಾಲ್ಲೂಕು ಅಧ್ಯಕ್ಷ ಶಿವವೀರಭದ್ರಪ್ಪ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.