ADVERTISEMENT

18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 19:53 IST
Last Updated 16 ಸೆಪ್ಟೆಂಬರ್ 2025, 19:53 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಚಾಮರಾಜನಗರ: ‘ಸರ್ಕಾರಿ, ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಶುರುವಾಗಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರ ನೇಮಕವಾಗಿದೆ ಎಂದು ಹೇಳಿದರು.

‘ವಿವೇಕ’ ಯೋಜನೆಯಡಿ 8,200 ಶಾಲಾ ಕೊಠಡಿ ನಿರ್ಮಿಸಿದ್ದು ಹೆಚ್ಚುವರಿ 3 ಸಾವಿರ ಕೊಠಡಿ ನಿರ್ಮಿಸಲಾಗುವುದು. ಹೊಸದಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.