ಯಳಂದೂರು: ತಾಲ್ಲೂಕಿನ ಪ್ರಸಿದ್ಧ ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ಗುರುವಾರ ಗೋಲಕ ಹಣದ ಎಣಿಕೆ ನಡೆಯಿತು. ಒಟ್ಟು ₹ 26,74,880 ಲಕ್ಷ ಸಂಗ್ರಹವಾಗಿದ್ದು. ದೇಗುಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾತೆಗೆ ತುಂಬಲಾಗಿದೆ.
ಗೋಲಕದಲ್ಲಿ ನೇಪಾಳಿ ಕರೆನ್ಸಿ ಹಾಗೂ ₹2 ಸಾವಿರ ಎರಡು ನೋಟುಗಳು ಸಿಕ್ಕಿವೆ. ಬೆಳಿಗ್ಗೆ ದೇವಾಲಯ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ನೌಕರರು ಸೇರಿ 40ಕ್ಕೂ ಹೆಚ್ಚಿನ ಸಿಬ್ಬಂದಿಗಳು ಗೋಲಕ ಹಣ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.
ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಮೋಹನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಪಾರುಪತ್ತೆಗಾರ ರಾಜು ಹಾಗೂ ದೇವಳದ ನೌಕರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.