ಹನೂರು: ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಸೋಮವಾರ ರಾತ್ರಿ ಕಳವು ಮಾಡಿದ್ದಾರೆ.
ದೇವಾಲಯದ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಎರಡು ಹುಂಡಿಗಳನ್ನು ಮುರಿದು, ಸುಮಾರು ₹20 ಸಾವಿರದಿಂದ ₹30ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಖಾಲಿ ಹುಂಡಿಗಳನ್ನು ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬಿಸಾಡಿದ್ದಾರೆ.
ದೇವಾಲಯದ ಅರ್ಚಕ ರಾಜೇಂದ್ರ ರಾಮಾಪುರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.