ADVERTISEMENT

ಚಾಮರಾಜನಗರ: 10 ಹೊಸ ಪ್ರಕರಣ, 12 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 7:12 IST
Last Updated 5 ಸೆಪ್ಟೆಂಬರ್ 2021, 7:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 10 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

78 ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಇಬ್ಬರು ಐಸಿಯುನಲ್ಲಿದ್ದಾರೆ. 19 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 32,359 ಮಂದಿಗೆ ಸೋಂಕು ತಗುಲಿದೆ. 31,744 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ 2,339 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,329 ಮಂದಿಯ ವರದಿ ನೆಗೆಟಿವ್‌ ಬಂದಿವೆ. 10 ಮಂದಿಗೆ ಕೋವಿಡ್‌ ಇರುವುದು ದೃಢ‍ಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.