ADVERTISEMENT

ಚಾಮರಾಜನಗರ: 10 ಪೊಲೀಸರಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 11:56 IST
Last Updated 11 ಜನವರಿ 2022, 11:56 IST
   

ಚಾಮರಾಜನಗರ: ಜಿಲ್ಲೆಯಲ್ಲಿ 10 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಸೋಂಕು ಖಚಿತರಾದವರಲ್ಲಿ ತಲಾ ಇಬ್ಬರು ಇನ್‌ಸ್ಪೆಕ್ಟರ್‌ಗಳು, ಸಬ್‌ ಇನ್‌ಸ್ಪೆಕ್ಟರ್‌ಗಳು, ಎಎಸ್‌ಐಗಳು ಹಾಗೂ ನಾಲ್ವರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಎಂಟು ಪೊಲೀಸರು ಕೋವಿಡ್‌ನಿಂದ ಬಳಲಿದರೆ, ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಯಾರಲ್ಲೂ ತೀವ್ರವಾದ ರೋಗ ಲಕ್ಷಣ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

’ಜಿಲ್ಲೆಯಾದ್ಯಂತ ರೋಗ ಲಕ್ಷಣ ಕಂಡು ಬಂದ ಸಿಬ್ಬಂದಿಗೆ ಪರೀಕ್ಷೆ ನಡೆಸುತ್ತಿದ್ದೇವೆ. ನಮ್ಮಲ್ಲಿ ಸದ್ಯ 10 ಮಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಗಂಭೀರ ರೋಗ ಲಕ್ಷಣಗಳಿಲ್ಲ‘ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.