ಸಂತೇಮರಹಳ್ಳಿ: ಸಮೀಪದ ಬಾಗಳಿ ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಚಂದ್ರನಾಯಕ ಅವರ ಮನೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಶನಿವಾರ ಭೇಟಿ ನೀಡಿ ಕುಟುಂಬದವರಿಗೆ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದರು.
ಕೂಡಲೇ ಸರ್ಕಾರದಿಂದ ದೊರಕುವ ಪರಿಹಾರವನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಉಪ ವಿಭಾಗಧಿಕಾರಿಯವರಿಗೆ ಹಾಗೂ ತಹಶೀಲ್ದಾರ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ನಿರ್ದೇಶಕ ಕಮರವಾಡಿ ರೇವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜಪ್ಪ, ಗುತ್ತಿಗೆದಾರರಾದ ಸಂತೇಮರಹಳ್ಳಿ ಪಶಿ, ಉಮ್ಮತ್ತೂರು ಶಿವಣ್ಣ, ಗಣಗನೂರು ನಾಗಯ್ಯ, ಕೆಇಬಿ ಗುತ್ತಿಗೆದಾರ ಮಹೇಶ್, ಕಂದಹಳ್ಳಿ ನಂಜುಂಡಸ್ವಾಮಿ, ಚಂದ್ರು, ಬಾಗಳಿ ರೇವಣ್ಣ, ಕೇಶವಮೂರ್ತಿ, ಜನ್ನೂರು ದೊರೆಸ್ವಾಮಿ, ಸಿದ್ದನಾಯ್ಕ, ಶಿವಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.