ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 310 ಮಂದಿಯ ಗಂಟಲು ದ್ರವದ ಮಾದರಿಗಳ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಯಾರಲ್ಲೂ ಸೋಂಕು ಕಂಡು ಬಂದಿಲ್ಲ. ನಾಲ್ವರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13ಕ್ಕೆ ಇಳಿದಿದೆ.
ಸೋಂಕಿತರ ಪೈಕಿ 10 ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 6,762 ಮಂದಿ ಗುಣಮುಖರಾಗಿದ್ದಾರೆ. 6,906 ಜನರಿಗೆ ಸೋಂಕು ತಗುಲಿದೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.