ADVERTISEMENT

ಚಾಮರಾಜನಗರ: 13 ಹೊಸ ಪ್ರಕರಣ, ಆರು ಮಂದಿ ಗುಣಮುಖ, ಒಂದು ಸಾವು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 14:45 IST
Last Updated 22 ನವೆಂಬರ್ 2020, 14:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 13 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಯೇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 94ಕ್ಕೆ ಏರಿದೆ. ಈ ಪೈಕಿ 46 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 14 ಮಂದಿ ಐಸಿಯುನಲ್ಲಿದ್ದಾರೆ.

ಕೋವಿಡ್‌ಯೇತರ ಕಾರಣದಿಂದ ಸಂತೇಮರಹಳ್ಳಿಯ 93 ವರ್ಷದ ವೃದ್ಧರೊಬ್ಬರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಅವರು ಮೃತಪಟ್ಟಿದ್ದಾರೆ. ನಂತರ ನಡೆಸಲಾದ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಹೇಳಿದೆ.

ADVERTISEMENT

ಭಾನುವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,258ಕ್ಕೆ ಏರಿದೆ. ಸೋಂಕು ಮುಕ್ತರಾದವರ ಸಂಖ್ಯೆ 6,036ಕ್ಕೆ ಹಿಗ್ಗಿದೆ. 108 ಮಂದಿ ಕೋವಿಡ್‌ ಕಾರಣದಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣದಿಂದ ಕೊನೆಯುಸಿರೆಳೆದಿದ್ದಾರೆ.

ಭಾನುವಾರ 1,344 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,332 ಮಂದಿಯ ವರದಿ ನೆಗಟಿವ್‌ ಬಂದಿದೆ. 12 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.