ADVERTISEMENT

35 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 16:00 IST
Last Updated 4 ಜುಲೈ 2021, 16:00 IST
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 1,566 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,504 ವರದಿಗಳು ನೆಗೆಟಿವ್‌ ಆಗಿವೆ. 62 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ, ಜಿಲ್ಲಾಡಳಿತ ತನ್ನ ವರದಿಯಲ್ಲಿ 35 ಪ್ರಕರಣಗಳನ್ನು ಮಾತ್ರ ಉಲ್ಲೇಖಿಸಿದೆ.

ಭಾನುವಾರ 69 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ 503ಕ್ಕೆ ಇಳಿದಿದೆ. ಸೋಂಕಿತರಲ್ಲಿ 27 ಮಂದಿ ಐಸಿಯುನಲ್ಲಿ 25 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 31 ಸಾವಿರ ದಾಟಿದೆ. ಈವರೆಗೆ 31,034 ಮಂದಿಗೆ ಸೋಂಕು ತಗುಲಿದೆ. 30,027 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.