ADVERTISEMENT

30 ಹೊಸ ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 15:50 IST
Last Updated 15 ಜುಲೈ 2021, 15:50 IST
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 30 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 66 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಚೇತರಿಕೆಗೊಂಡವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 341ಕ್ಕೆ ಇಳಿದಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ 20ಕ್ಕೆ ಇಳಿದಿದೆ. ಎಂಟು ಮಂದಿ ಮನೆಯಲ್ಲೇ ಇದ್ದುಕೊಂಡು ಆರೈಕೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 31,471 ಪ್ರಕರಣಗಳು ವರದಿಯಾಗಿವೆ. 30,612 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕೋವಿಡ್‌ ಹಾಗೂ ಅನ್ಯ ಕಾರಣಗಳಿಂದ 559 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಬುಧವಾರ 1,328 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,292 ವರದಿಗಳು ನೆಗೆಟಿವ್ ಬಂದು, 36 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತವು ತನ್ನ ವರದಿಯಲ್ಲಿ 30 ಪ್ರಕರಣಗಳನ್ನು ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.