ADVERTISEMENT

ಚಾಮರಾಜನಗರ: 32 ಹೊಸ ಪ್ರಕರಣ, 62 ಮಂದಿ ಕೋವಿಡ್‌ನಿಂದ ಗುಣಮುಖ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 14:05 IST
Last Updated 28 ಅಕ್ಟೋಬರ್ 2020, 14:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 32 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 62 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಕಸ್ತೂರು ಗ್ರಾಮದ 80 ವರ್ಷದ ವೃದ್ಧೆಗೆ ಅ.21ರಂದು ಕೋವಿಡ್‌ ಇರುವುದು ದೃಢಪಟ್ಟಿತ್ತು. ರೋಗ ಲಕ್ಷಣ ಇಲ್ಲದೇ ಇದ್ದುದರಿಂದ ಹೋಂ ಐಸೊಲೇಷನ್‌ನಲ್ಲಿದ್ದರು. ಮಂಗಳವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 104ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 19 ಮಂದಿ ಕೊನೆಯುಸಿರೆಳೆದಿದ್ದಾರೆ.

ಬುಧವಾರದ ಅಂಕಿ ಅಂಶಗಳೂ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 5,884 ಪ್ರಕರಣಗಳು ದೃಢಪಟ್ಟಿವೆ. 5,469 ಮಂದಿ ಗುಣಮುಖರಾಗಿದ್ದಾರೆ. 292 ಸಕ್ರಿಯ ಪ್ರಕರಣಗಳಿದ್ದು, 135 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 45 ಮಂದಿ ಇದ್ದಾರೆ.

ADVERTISEMENT

90 ಸಾವಿರ ಗಡಿ ದಾಟಿದ ಪರೀಕ್ಷೆ: ಬುಧವಾರ 1026 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. 995 ಮಂದಿಯ ವರದಿ ನೆಗೆಟಿವ್‌ ಬಂದಿದೆ. 31 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಜಿಲ್ಲೆಯಲ್ಲಿ 90,954 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. 85,207 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.