ADVERTISEMENT

ಮೊದಲ ಹಂತದ ಗ್ರಾ.ಪಂ. ಚುನಾವಣೆ: 32 ನಾಮಪತ್ರ ತಿರಸ್ಕೃತ

3,552 ನಾಮಪತ್ರಗಳು ಕ್ರಮಬದ್ಧ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 10:25 IST
Last Updated 13 ಡಿಸೆಂಬರ್ 2020, 10:25 IST
ಗ್ರಾ.ಪಂ ಚುನಾವಣೆ 2020
ಗ್ರಾ.ಪಂ ಚುನಾವಣೆ 2020   

ಚಾಮರಾಜನಗರ:ಗುಂಡ್ಲುಪೇಟೆ ಹಾಗೂ ಚಾಮರಾಜನಗರ ತಾಲ್ಲೂಕುಗಳಲ್ಲಿ ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯತಿಗಳ ಚುನಾವಣೆಗಾಗಿ ಸಲ್ಲಿಕೆಯಾಗಿರುವ 3,705 ನಾಮಪತ್ರಗಳ ಪೈಕಿ 32 ನಾಮಪತ್ರಗಳು ತಿರಸ್ಕೃತವಾಗಿದೆ.

ಶನಿವಾರ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು,3,552 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ಚಾಮರಾಜನಗರ ತಾಲ್ಲೂಕಿನಲ್ಲಿ43 ಗ್ರಾಮ ಪಂಚಾಯಿತಿಗಳಿದ್ದು, 2,267 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 18 ನಾಮಪತ್ರಗಳು ತಿರಸ್ಕೃತಗೊಂಡಿವೆ.

ADVERTISEMENT

34 ಗ್ರಾಮ ಪಂಚಾಯತಿಗಳಿರುವ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 1,438 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 14 ನಾಮಪತ್ರಗಳು ತಿರಸ್ಕೃತವಾಗಿದ್ದು, 1409 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಕಡೇ ದಿನ: ಮೊದಲ ಹಂತದ ಚುನಾವಣೆ ವೇಳಾಪಟ್ಟಿ ಪ್ರಕಾರ ನಾಮಪತ್ರ ಸಲ್ಲಿಸಲು ಸೋಮವಾರ (ಡಿ.14) ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.