ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ (ರಾಷ್ಟ್ರೀಯ ಹೆದ್ದಾರಿ) ತಮಿಳುನಾಡು ನೋಂದಣಿಯ ಟೆಂಪೊ ಟ್ರಾವೆಲರ್ ಒಂದು ಶುಕ್ರವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಂಜಾನೆ 4.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದೆ. 11 ಜನರು ಗಾಯಗೊಂಡಿದ್ದಾರೆ. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ.
ತಿರುಪ್ಪೂರಿನ 14 ಮಂದಿ ಮೈಸೂರಿಗೆ ಹೊರಟಿದ್ದರು. ಮೃತರನ್ನು ಸುಬ್ರಮಣ್ಯ (75), ಅವರ ಪತ್ನಿ ಅಮರಾವತಿ (65) ಹಾಗೂ ಪುತ್ರಿ ಕೋಕಿಲ (40) ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.