ADVERTISEMENT

ಚಾಮರಾಜನಗರದಲ್ಲಿ ಮತ್ತೆ ಮೂವರು ಸೋಂಕಿತರ ಸಾವು, 62 ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:18 IST
Last Updated 24 ಸೆಪ್ಟೆಂಬರ್ 2020, 14:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ –19 ದೃಢ ಪಟ್ಟ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಸೋಂಕಿನಿಂದಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಬೇರೆ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.

ಮೈಸೂರು ಜಿಲ್ಲೆ ಗರ್ಗೇಶ್ವರಿ ನಿವಾಸಿ 57 ವರ್ಷದ ಮಹಿಳೆ ಸೆ.17ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ನಡುಕಲು ಮೋಳೆ ಗ್ರಾಮದ 58 ವರ್ಷದ ಪುರುಷ ಸೆ.7ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಕೂಡ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ADVERTISEMENT

ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಚಾಮರಾಜನಗರ ತಾಲ್ಲೂಕು ಕಾಡಹಳ್ಳಿ ಗ್ರಾಮದ ನಿವಾಸಿ, 75 ವರ್ಷದ ವೃದ್ಧರೊಬ್ಬರು ಸೆ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 57 ಹಾಗೂ ಸೋಂಕು ದೃಢಪಟ್ಟು, ಬೇರೆ ಅನಾರೋಗ್ಯದಿಂದ ಅಸುನೀಗಿದವರ ಸಂಖ್ಯೆ 26ಕ್ಕೆ ಏರಿದೆ. ಒಟ್ಟಾರೆ ಮೃತಪಟ್ಟ ಸೋಂಕಿತರ ಸಂಖ್ಯೆ 75ಕ್ಕೆ ತಲುಪಿದೆ.

ಹೊಸದಾಗಿ 62 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 25 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3,696ಕ್ಕೆ ಹಿಗ್ಗಿದೆ. 2,978ಮಂದಿ ಗುಣಮುಖರಾಗಿದ್ದಾರೆ. 633 ಸಕ್ರಿಯ ಪ್ರಕರಣಗಳಿವೆ. 294 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 28 ಮಂದಿ ಐಸಿಯುನಲ್ಲಿದ್ದಾರೆ.

ಗುರುವಾರ 695 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಆರ್‌ಟಿ‍ಪಿಸಿಆರ್‌ 466, ರ‍್ಯಾಪಿಡ್‌ ಆ್ಯಂಟಿಜೆನ್‌ 174, ಟ್ರುನಾಟ್‌ 55 ಪರೀಕ್ಷೆಗಳು. 635 ಮಂದಿಯ ವರದಿ ನೆಗೆಟಿವ್‌ ಬಂದಿದೆ. 60 ಮಂದಿಗೆ ಸೋಂಕು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.