ADVERTISEMENT

ಚಾಮರಾಜನಗರ: ಮೂರು ಹೊಸ ಕೋವಿಡ್ ಪ್ರಕರಣ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 16:45 IST
Last Updated 3 ಫೆಬ್ರುವರಿ 2021, 16:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಮೂರು ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ನಾಲ್ವರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17ಕ್ಕೆ ಇಳಿದಿದೆ.

ಸಕ್ರಿಯ ಪ್ರಕರಣಗಳ ಪೈಕಿ, 12 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 6,906 ಪ್ರಕರಣಗಳು ದೃಢಪಟ್ಟಿವೆ. 6,758 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.

ADVERTISEMENT

ಬುಧವಾರ 834 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 831 ವರದಿಗಳು‌ ನೆಗೆಟಿವ್ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.